ಮಂಗಳೂರು: ನಗರದ ಕಂಕನಾಡಿ ಬಳಿ ಕೆಲ ದಿನಗಳ ಹಿಂದೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಬಾಂಬ್ ಸ್ಫೋಟದಿಂದ ಸ್ಫೋಟಗೊಂಡ ಆಟೋ ರಿಕ್ಷಾವನ್ನು ಪರಿಶೀಲಿಸಿ, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ರಿಕ್ಷಾ ಚಾಲಕ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಸಚಿವ ಆರಗ ಜ್ಞಾನೇಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಪ್ರಕರಣದ ಪ್ರಮುಖ ಶಂಕಿತನಾಗಿರುವ ಮೊಹಮ್ಮದ್ ಶಾರಿಕ್ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದು, ಸ್ಫೋಟಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್, ಕಮಿಷನರ್ ಎನ್.ಶಶಿಕುಮಾರ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
_CLick to Follow-Support us on DailyHunt