ಬೆಳಗಾವಿ:
ಮುಖ್ಯಮಂತ್ರಿ ಶ್ರೀಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಗಾವಿಯಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಸಂಸತ್ ಸದಸ್ಯರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಶ್ರೀಲಕ್ಷ್ಮಣ ಸವದಿ, ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವರಾದ ಶ್ರೀ ಆರ್. ಅಶೋಕ, ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಸೇರಿದಂತೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡಮಾಡಿದ, ಕೋವಿಡ್-19 ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನುಮಾನ್ಯ ಮುಖ್ಯಮಂತ್ರಿ ಬಿಎಸ್ ವೈ ಅವರು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು.
ಬೆಳಗಾವಿ, ಬಾಗಲಕೋಟೆ:
ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಮಾನ್ಯ ಮುಖ್ಯ ಮಂತ್ರಿಗಳು ಪರಿಶೀಲಿಸಿದರು.


ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವರಾದ ಶ್ರೀ ಆರ್. ಅಶೋಕ, ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಜೊತೆಗಿದ್ದರು.
ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ, ಆಲಮಟ್ಟಿ:
ತುಂಬಿರುವ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ವೈ ಅವರು ಬಾಗಿನ ಅರ್ಪಿಸಿದರು.


ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವರಾದ ಶ್ರೀ ಆರ್. ಅಶೋಕ, ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ, ಶಾಸಕರಾದ ಮುರುಗೇಶ ನಿರಾಣಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್, ಜಿ.ಪಂ ಅದ್ಯಕ್ಷೆ ಬಾಯಕ್ಕ ಮೇಟಿ, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಯ ಜನ ಪ್ರತಿನಿಧಿಗಳು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಅತಿಥಿ ಗೃಹ, ಆಲಮಟ್ಟಿ:
ಸಿಎಮ್ ಬಿಎಸ್ ವೈ ಅವರು ಆಲಮಟ್ಟಿ ಅತಿಥಿಗೃಹದ ಸಭಾಂಗಣದಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.


ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವರಾದ ಶ್ರೀ ಆರ್. ಅಶೋಕ, ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ, ಶಾಸಕರಾದ ಮುರುಗೇಶ ನಿರಾಣಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್, ಜಿ.ಪಂ ಅದ್ಯಕ್ಷೆ ಬಾಯಕ್ಕ ಮೇಟಿ, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಯ ಜನ ಪ್ರತಿನಿಧಿಗಳು ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.