ಸುದ್ದಿಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು.
ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು, ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಸ್ಕ್ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಾಲನೆ ನೀಡಿದರು.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಮ್. ಕಾರಜೋಳ ಹಾಗೂ ಡಾ.ಅಶ್ವಥ್ ನಾರಾಯಣ ಸಿ.ಎನ್. ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ, ಕಂದಾಯ ಸಚಿವ ಆರ್. ಅಶೋಕ್, ಸಂಸದರಾದ ಪಿ.ಸಿ. ಮೋಹನ್ ಹಾಗೂ ತೇಜಸ್ವಿ ಸೂರ್ಯ, ಖ್ಯಾತ ಕ್ರಿಕೇಟ್ ಪಟು ಅನಿಲ್ ಕುಂಬ್ಳೆ, ಚಿತ್ರ ನಟ ಪುನಿತ್ ರಾಜ್ ಕುಮಾರ್, ನಟಿ ರಾಗಿಣಿ ದ್ವಿವೇದಿ ಮೊದಲಾದವರು ವಿಧಾನಸೌಧದದಿಂದ ಕಬ್ಬನ್ ಪಾರ್ಕ್ ವರೆಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
