ಬೆಂಗಳೂರು: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಿನ್ನೆ ಸಮಾರೋಪಗೊಂಡಿತು.
ಮಲ್ಲಿಕಾರ್ಜುನ ಖರ್ಗೆ, ಪಕ್ಷಬೇಧವಿಲ್ಲದೆ ಕಾಂಗ್ರೆಸ್ ಪಾದಯಾತ್ರೆಗೆ ಜನರು ಬೆಂಬಲ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೇಕೆದಾಟು ಅನುಷ್ಠಾನಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು. ಇದರಿಂದ 1 ಕೋಟಿ 20 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ ಎಂದರು. ಸಿದ್ದರಾಮಯ್ಯ, ದೇಶದಲ್ಲಿ ಹೆಚ್ಚಿನ ಒಣ ಪ್ರದೇಶಗಳಿರುವ ಪ್ರಮುಖ ರಾಜ್ಯಗಳ ಪೈಕಿ ಕರ್ನಾಟಕವು ಒಂದಾಗಿದ್ದು, ಮೇಕೆದಾಟು ಯೋಜನೆ ಅನುಷ್ಠಾನ ಮಾಡುವ ಮೂಲಕ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಡಿ.ಕೆ ಶಿವಕುಮಾರ್, ಗಂಗಾ- ಕಾವೇರಿ ನದಿ ಜೋಡಣೆ ವಿಚಾರ ಕುರಿತು ಹಲವು ಚರ್ಚೆಗಳು ನಡೆಯುತ್ತಿದ್ದು, ಸರ್ಕಾರ ಮೇಕೆದಾಟು ಯೋಜನೆಗೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಮೇಕೆದಾಟು ಸಮತೋಲನ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ ಎಂದರು. ರಣದೀಪ್ ಸಿಂಗ್ ಸುರ್ಜೇವಾಲಾ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೋಜನೆ ಅನುಷ್ಠಾನಕ್ಕೆ ಸಂಕಲ್ಪ ಮಾಡಬೇಕಿದೆ ಎಂದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಂಸದ ಡಿ.ಕೆ. ಸುರೇಶ್, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.