ಸಂಕ್ಷಿಪ್ತ ಸುದ್ದಿ:
ಮೈಸೂರು: ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡ ಹಾಗೂ ಪೊಲೀಸ್ ಗೃಹ-2020 ಯೋಜನೆಯಡಿ 108 ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರಗೌಡ, ಸಂಸದರಾದ ಪ್ರತಾಪ್ ಸಿಂಹ, ಮೈಸೂರಿನ ಮಾನ್ಯ ಶಾಸಕರು, ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಸೇರಿದಂತೆ ಇನ್ನಿತರ ಗಣ್ಯ ಮಾನ್ಯರು, ಇಲಾಖಾ ವರ್ಗದವರು ಭಾಗವಹಿಸಿದ್ದರು.
