ಯಲ್ಲಾಪುರ: ತಾಲೂಕಿನ ಕಳಚೆ ಭಾಗದಲ್ಲಿ ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಇಂದು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂತ್ರಸ್ತ ಕುಟುಂಬಸ್ಥರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಸಾಂತ್ವನ ಹೇಳಲಾಯಿತು ಮತ್ತು ಭೂ ಕುಸಿತದಿಂದ ಈ ಭಾಗದ ಹಲವಾರು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಂತಹ ಗ್ರಾಮಗಳಿಗೆ ತಾತ್ಕಾಲಿಕವಾಗಿ ರಸ್ತೆಯನ್ನು ನಿರ್ಮಾಣ, ಗ್ರಾಮಸ್ಥರಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡುವುದಕ್ಕೆ ಮತ್ತು ಅವರೊಂದಿಗೆ ಸಂಪರ್ಕ ಸಾಧಿಸಲು ಬೇಕಾಗಿರುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭದಲ್ಲಿ ಸ್ಥಳಿಯರು ಸೇರಿದಂತೆ ಇಲಾಖಾ ಅಧಿಕಾರಿಗಳಿದ್ದರು.
“ಮಾಸ್ಕ್ ಧರಿಸಿ–ದೈಹಿಕ ಅಂತರ ಕಾಪಾಡಿ–ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ”