ಬೆಂಗಳೂರು: ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ಸ್ ಲಿಮಿಟೆಡ್ ವತಿಯ “ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಶ್ರೀಗಂಧದ ವನ”ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.
ನಂತರ ಬಸವರಾಜ ಬೊಮ್ಮಾಯಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಮರಾಜ ಒಡೆಯರ್ ಆರಂಭಿಸಿರುವ ಈ ಸಂಸ್ಥೆ ತನ್ನ ಗುಣಮಟ್ಟವನ್ನು ಕಾಪಾಡುವುದರ ಜೊತೆಗೆ ಆಧುನಿಕ ಡಿಜಿಟಲ್ ತಂತ್ರಜ್ಞಾನ ಮಾರುಕಟ್ಟೆ ಪ್ರವೇಶಿಸಿ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮುನ್ನಡೆ ಸಾಧಿಸಬೇಕು ಎಂದು ಸೂಚಿಸಿದರು. ಶ್ರೀಗಂಧದ ದ್ರವ್ಯ ಬಳಕೆ ಮಾಡಿ ಉತ್ಪಾದಿಸುವ ಸಾಬೂನು ವಿಶ್ವದೆಲ್ಲೆಡೆ ಪ್ರಸಿದ್ಧಿಯಾಗಿದೆ. ಇದರ ಮಾರುಕಟ್ಟೆಯನ್ನು ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸಲಹೆ ಮಾಡಿದರು.

ಈ ವೇಳೆ ಸಚಿವರಾದ ಮುರುಗೇಶ್ ನಿರಾಣಿ, ಕೆ. ಗೋಪಾಲಯ್ಯ, ನಿಗಮದ ಅಧ್ಯಕ್ಷ ಮಾಡ್ನಾಳ್ ವಿರೂರಾಕ್ಷಪ್ಪ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
_Follow & support on DailyHunt