ಭಾರತ ಸರ್ಕಾರದ ನಿರ್ದೇಶನದಂತೆ, ದಿನಾಂಕ 21-06-2021 ರಂದು ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳವನ್ನು ಈ ಕೆಳಕಂಡ ಮಾರ್ಗಸೂಚಿಗಳೊಂದಿಗೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಲಸಿಕಾ ಮೇಳದ ಮಾರ್ಗಸೂಚಿಗಳು:
- 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮೊದಲ ಆದ್ಯತೆ
- 2ನೇ ಡೋಸ್ ಗೆ ಬಾಕಿ ಇರುವ ಫಲಾನುಭವಿಗಳ ಲಸಿಕಾಕರಣ.
- ಭಾರತ ಸರ್ಕಾರದ ವ್ಯಾಖ್ಯಾನದಂತೆ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರ ಲಸಿಕಾಕರಣ.
- 18 ರಿಂದ 44 ವರ್ಷ ವಯೋಮಾನದವರ ರಾಜ್ಯ ಗುರುತಿಸಿರುವ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು ರಾಜ್ಯ ಕರೋನ ಮುಂಚೂಣಿ ಕಾರ್ಯಕರ್ತರ ಲಸಿಕಾಕರಣ.
- ಕೋವ್ಯಾಕ್ಸಿನ್ ಲಸಿಕೆಯ ಮೊದಲನೇ ಡೋಸ್ ಲಸಿಕಾಕರಣ.

ಸದರಿ ಮೇಳದ ಯಶಸ್ವಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯು ಕೋವಿಡ್-19 ಲಸಿಕಾ ಕೇಂದ್ರಕ್ಕೆ ಫಲಾನುಭವಿಗಳನ್ನು ಸಜ್ಜುಗೊಳಿಸುವಿಕೆಗಾಗಿ / ಜಾಗೃತಿ ಮೂಡಿಸುವ ಸಲುವಾಗಿ ಸಹಕರಿಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: