ರಾಯಚೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಭಾರತ ಐಕ್ಯತಾ ಯಾತ್ರೆ ಅಂಗವಾಗಿ ಇದೇ 15ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ , ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಂಡು, ಪಾದಯಾತ್ರೆಯನ್ನು ಯಶ್ವಸಿಗೊಳಿಸುವಂತೆ ಕರೆ ನೀಡಿದರು.
ನಂತರ ಸಮಾವೇಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು, ಈ ಯಾತ್ರೆ ಇದೇ 21 ರಂದು ರಾಯಚೂರು ಜಿಲ್ಲೆಗೆ ಪಾದಯಾತ್ರೆ ಆಗಮಿಸಲಿದೆ. ಇಲ್ಲಿಂದ ತೆಲಂಗಾಣದತ್ತ ಮುಂದುವರಿಯಲಿದೆ ಎಂದರು.
ಭಾರತ್ ಜೋಡೋ ಯಾತ್ರೆ ಬಳಿಕ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ತಮ್ಮ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿ, ರಥಯಾತ್ರೆ ಕೈಗೊಳ್ಳಲಿದ್ದು, ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ಸಂಚರಿಸಲಿದೆ ಎಂದು ತಿಳಿಸಿದರು.
ದೇಶದ ಸಾಲ 152 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿದೆ. ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಚರ್ಚೆಗಳೇ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಮ್ ಬಿ ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ನಾಯಕ್, ಶಾಸಕರಾದ ಬಸವನಗೌಡ ದದ್ದಲ್, ಡಿ ಎಸ್ ಹೂಲಗೇರಿ, ಬಸವನಗೌಡ ತುರುವೀಹಾಳ ಮತ್ತಿತರ ನಾಯಕರು ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
_ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಲು ಕ್ಲಿಕ್ಕಿಸಿ