ರಾಯಚೂರು: ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನಿನ್ನೆ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 2021ನೇ ಸಾಲಿನ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಮಾಡಲಾಯಿತು. ಇದೇ ವೇಳೆ ಸಾಹಿತ್ಯ ಪಥ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿದ ಹಿರಿಯ ಸಾಹಿತಿ ಎಚ್.ಎಸ್. ಶಿವಪ್ರಕಾಶ್, ಸಾಹಿತ್ಯ ಅಕಾಡೆಮಿ ವಿವಿಧ ಕಡೆ ಕಾರ್ಯಕ್ರಮಗಳನ್ನು ಆಯೋಜಿಸಿ ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುತ್ತಿರುವುದು ಸ್ವಾಗತಾರ್ಹ. ಕನ್ನಡ ಸಾಹಿತ್ಯದಲ್ಲಿ ಕಾಣಸಿಗುವ ಸಮಗ್ರ ಸಾಹಿತ್ಯ ದೇಶದ ಇತರೆ ಭಾಷಾ ಸಾಹಿತ್ಯದಲ್ಲಿ ಇಲ್ಲ ಎಂದರು. ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಕನ್ನಡದ ಸಾರಸ್ವತ ಲೋಕ ಬೆಳಗಿಸುವಲ್ಲಿ ಹೊಸ ಬರಹಗಾರರನ್ನು ಹಿರಿಯರೊಂದಿಗೆ ಮೇಳೈಸುವಲ್ಲಿ ಸಾಹಿತ್ಯ ಅಕಾಡೆಮಿ ಯಶಸ್ವಿಯಾಗಿ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಹಿರಿಯ ಸಾಹಿತಿ ಎಚ್.ಎಸ್. ಶಿವಪ್ರಕಾಶ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸವನಗೌಡ ದದ್ದಲ, ಸಾಹಿತ್ಯ ಅಕಾಡೆಮಿ ಸದಸ್ಯರಾದ ಬಿ.ಎಂ ಶರಭೇಂದ್ರ ಸ್ವಾಮಿ, ಛಾಯಾ ಭಗವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
CLICK to Follow in Googlenews