ಸಂಕ್ಷಿಪ್ತ ಸುದ್ದಿ:
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರು, ಇತ್ತೀಚಿಗೆ ಅಕಾಲಿಕವಾಗಿ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ನಿವಾಸಕ್ಕೆ ಭೇಟಿ ನೀಡಿ, “ ಗಸ್ತಿ” ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸಂಸದರಾದ ಭಗವಂತ ಖೂಬಾ, ಶಾಸಕರಾದ ಡಾ. ಶಿವರಾಜ ಪಾಟೀಲ್, ಲಿಂಗಸಗೂರು ಮಾಜಿ ಶಾಸಕರಾದ ಮಾನಪ್ಪ ವಜ್ಜಲ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
