ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ಸಂಕ್ಷಿಪ್ತ ಸುದ್ದಿ:
ರಾಯಚೂರು: ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಪಟ್ಟಂತೆ ಕೈಗೊಂಡಿರುವ ಅಗತ್ಯ ಕ್ರಮಗಳ ಬಗ್ಗೆ, ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಲಕ್ಷ್ಮಣ ಸವದಿ ಇವರ ನೇತೃತ್ವದಲ್ಲಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಹಾಗೂ ಇದೇ ವೇಳೆ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ ನೆರೆ ಸಂಬಂಧಪಟ್ಟಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆಯನ್ನೂ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸದರಾದ ಮಾನ್ಯ ಸಂಗಣ್ಣ ಕರಡಿ, ಮಾನ್ಯ ರಾಜಾ ಅಮರೇಶ್ವರ ನಾಯಕ, ರಾಜ್ಯಸಭಾ ಸದಸ್ಯರಾದ ಮಾನ್ಯ ಅಶೋಕ ಗಸ್ತಿ, ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.