ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ, ಮತದಾನದ ಅವಶ್ಯಕ ಸಾಮಗ್ರಿ ಹಾಗೂ ಬ್ಯಾಲೆಟ್ ಬಾಕ್ಸ್‌ಗಳನ್ನು ನವದೆಹಲಿಯ ಭಾರತ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ಆಯಾ ರಾಜ್ಯಗಳಿಗೆ ರವಾನಿಸಲಾಗಿದೆ.
ಕರ್ನಾಟಕಕ್ಕೆ ಬ್ಯಾಲೆಟ್ ಬಾಕ್ಸ್ ತರುವ ಕಾರ್ಯದ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ವಹಿಸಿಕೊಂಡಿದ್ದಾರೆ. ಈ ಬಾಕ್ಸ್ ಇಂದು ಸಂಜೆ ನವದೆಹಲಿಯಿಂದ ನಿರ್ಗಮಿಸಿ, ರಾತ್ರಿ 8:15 ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ.
ಇಂದು ರಾತ್ರಿ 9 ಗಂಟೆಗೆ ವಿಧಾನಸೌಧ ತಲುಪಲಿರುವ ಈ ವಿಶೇಷ ಬ್ಯಾಲೆಟ್ ಜರ್ನಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಸಹಾಯಕ ಚುನಾವಣಾಧಿಕಾರಿ ಶ್ರೀಮತಿ ವಿಶಾಲಾಕ್ಷಿ ಸ್ವಾಗತಿಸಲಿದ್ದಾರೆ.

CLICK to Follow us on ‘ShareChat’