ವರದಿಗಾರರು: ಸುರೇಶ ಹಿರೇಮಠ, ಲಿಂಗಸಗೂರು.
ಲಿಂಗಸಗೂರು: ಸಂತೆಕೆಲ್ಲೂರು ಗ್ರಾಮದ ಆಶಾ ಕಾರ್ಯಕರ್ತೆಯರು ಮಾಸಿಕ ರೂ.12000 ಗೌರವಧನ ಖಾತರಿಗಾಗಿ, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸಂರಕ್ಷಣಾ ಸಾಮಾಗ್ರಿ ನೀಡುವಿಕೆಗಾಗಿ ಹಾಗೂ ಕೋವಿಡ್-19 ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆಯೊಂದಿಗೆ ಪರಿಹಾರಕ್ಕಾಗಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.
“ಈ ಮೊದಲು ರಾಜ್ಯವ್ಯಾಪಿಯಾಗಿ ತಾಲೂಕ, ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ, ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರರಿಗೆ ಮತ್ತು ಆರೋಗ್ಯಾಧಿಕಾರಿಗಳಿಗೆ ಮತ್ತು ರಾಜ್ಯದ ಹಲವಾರು ಸಚಿವರಿಗೆ ಮತ್ತು ಶಾಸಕರಿಗೆ ಖುದ್ದಾಗಿ ಆಶಾ ಕಾರ್ಯಕರ್ತೆಯರು ಅವರವರ ಕ್ಷೇತ್ರಗಳಲ್ಲಿ ಮನವಿಯೊಂದಿಗೆ ಆಶಾ ಕಾರ್ಯಕರ್ತೆಯರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿತ್ತು” ಎಂದು ತಿಳಿಸುತ್ತಾ,

ಕಳೆದ ಜನೇವರಿ ತಿಂಗಳಿನಿಂದ ಸರ್ಕಾರಕ್ಕೆ ಸಂಘದಿಂದ ಹತ್ತು ಮನವಿ ಪತ್ರಗಳನ್ನು ಸಲ್ಲಿಸಿದ್ದಾಗಿಯೂ ಮನವಿ ಪತ್ರಗಳಲ್ಲಿನ ವಿಷಯಗಳ ಕುರಿತು ಚರ್ಚಿಸಲು ಈವರೆಗೂ ಸರ್ಕಾರದಿಂದ ಪ್ರತಿಕ್ರಿಯೆ ಬಂದಿರುವುದಿಲ್ಲವಾದ್ದರಿಂದ, ಅನಿವಾರ್ಯವಾಗಿ ರಾಜ್ಯಾದ್ಯಂತ ಜುಲೈ 10, ರಿಂದ ಅನಿರ್ದಿಷ್ಟ ಅವಧಿಯವರೆಗೆ ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸವುದಾಗಿ, ಸರ್ಕಾರದ ನಿರ್ಲ್ಯಕ್ಷ್ಯ ಧೋರಣೆಯನ್ನು ಖಂಡಿಸುತ್ತಾ, ಕೊರೊನ ವಾರಿಯರ್ಸ್‌ಗಳ ನ್ಯಾಯಯುತವಾದ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಸ್ಪಂದಿಸಿ, ಆಶಾ ಕಾರ್ಯಕರ್ತೆಯರ ಸೇವೆಯನ್ನು ಒದಗಿಸಲು ಹಾಗೂ ಜನಪರ ಕಾಳಜಿಯನ್ನು ತೋರಿಸಬೇಕೆಂದು ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.12000 ಗೌರವಧನ ಖಾತರಿಗಾಗಿ, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸಂರಕ್ಷಣಾ ಸಾಮಾಗ್ರಿ ನೀಡುವಿಕೆಗಾಗಿ ಹಾಗೂ ಕೋವಿಡ್-19 ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆಯೊಂದಿಗೆ ಪರಿಹಾರಕ್ಕಾಗಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮನಗೌಡ ಪೊಲೀಸ್ ಪಾಟೀಲ್ ಇವರ ಮೂಲಕ, ಅಶಾ ಕಾರ್ಯಕರ್ತೆಯರಾದ ಪಾರ್ವತಿ ಬಡಿಗೇರ್, ಜ್ಯೋತಿ ಲಕ್ಷ್ಮಿ, ಶ್ರೀದೇವಿ, ಹನುಮಂತಿ ಹಾಗೂ ಶೋಭಾ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.