ವರದಿಗಾರರು: ಸುರೇಶ ಹಿರೇಮಠ, ಲಿಂಗಸಗೂರು.
ಲಿಂಗಸಗೂರು: ಸಂತೆಕೆಲ್ಲೂರು ಪ್ರಾಥಮಿಕ ಆರೋಗ್ಯ ಕೆಂದ್ರದ ಸೂಚನೆ ಮೇರೆಗೆ ಆಶಾ ಕಾರ್ಯಕರ್ತೆಯರು ಮನೆ ಮನೆಗೂ ತೆರಳಿ ಐಎಲ್ ಐ ಕುರಿತು, 60 ವರ್ಷದ ಮೇಲ್ಪಟ್ಟವರು, ಗರ್ಭಿಣಿಯರು, ಮಧುಮೇಹ, ಐಎಲ್‌ಐ, ಉಸಿರಾಟದ ತೊಂದರೆ, ಮೂತ್ರಪಿಂಡದ ತೊಂದರೆ ಮೊದಲಾದ ಗಂಭೀರ ಸಮಸ್ಯೆಗಳನ್ನು ಕುರಿತಾಗಿ ಸಮೀಕ್ಷೆ ಕೈಗೋಂಡಿರುವ ಬಗ್ಗೆ ವರದಿಯಾಗಿದೆ.
ಐಎಲ್ಐ ಸರ್ವೆಯ ಸೂಚಿತ ಲಕ್ಷಣಗಳು ಕಂಡುಬಂದಲ್ಲಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಳ್ಳಲು ಸೂಚಿಸಿ, ಅಂಕಿ ಅಂಶಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಬಂಧಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ ನೀಡಲಾಗಿದೆ.

ಈ ಸರ್ವೆ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರಾದ ಪಾರ್ವತಿ ಬಡಿಗೇರ ತೊಡಗಿದ್ದರು.