Saturday, May 17, 2025
Homeಕರ್ನಾಟಕಸಿ ಎಂ ಅಧ್ಯಕ್ಷತೆಯಲ್ಲಿ ತಜ್ಞರು, ಅಧಿಕಾರಿಗಳ ಸಭೆ: ತಜ್ಞರ ಶಿಫಾರಸ್ಸಿನಂತೆ ವಾರಾಂತ್ಯ ಕರ್ಫ್ಯೂ ರದ್ದು...

ಸಿ ಎಂ ಅಧ್ಯಕ್ಷತೆಯಲ್ಲಿ ತಜ್ಞರು, ಅಧಿಕಾರಿಗಳ ಸಭೆ: ತಜ್ಞರ ಶಿಫಾರಸ್ಸಿನಂತೆ ವಾರಾಂತ್ಯ ಕರ್ಫ್ಯೂ ರದ್ದು !

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ಸಂಬಂಧ ಕೈಗೊಳ್ಳಬೇಕಿರುವ ಇನ್ನಷ್ಟು ಕಠಿಣ ಕ್ರಮಗಳು ಹಾಗೂ ಪ್ರಸ್ತುತ ಜಾರಿಗೊಳಿಸಿರುವ ನಿಯಮಗಳಲ್ಲಿ ಸಡಿಲಿಕೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ , ಕೋವಿಡ್ ತಜ್ಞರ ಸಮಿತಿ ಸದಸ್ಯರು, ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್ ಅಶೋಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಳಿಕ ಸಭೆಯ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ ಆರ್. ಅಶೋಕ, ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಲು ತಜ್ಞರ ಶಿಫಾರಸ್ಸಿನ ಮೇರೆಗೆ ಸರ್ಕಾರ ನಿರ್ಧರಿಸಿದ್ದು, ನಾಳೆಯಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ, ಬಾರ್, ರೆಸ್ಟೋರೆಂಟ್ , ಹೋಟೆಲ್‌ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇಕಡ 50 ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೋವಿಡ್h ನಿಯಮಗಳ ಪಾಲನೆ ಜಾರಿಯಲ್ಲಿರಲಿವೆ ಎಂದು ತಿಳಿಸಿದರು. ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರು ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಕೇವಲ ಪ್ರತಿಶತ ಶೇಕಡ 5ರಷ್ಟಿದ್ದು, ಆಸ್ಪತ್ರೆಗೆ ಸೇರುವವರ ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ವಾರಾಂತ್ಯ ಕರ್ಫ್ಯೂ ಜಾರಿಗಳಿಸಲು ನಿರ್ಧರಿಸಲಾಗಿದೆ ಎಂದರು.

ಇದೇ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದ ಜನರ ಜವಾಬ್ದಾರಿ ಇನ್ನು ಮೇಲೆ ಹೆಚ್ಚಿದ್ದು, ಸರ್ಕಾರ ವಾರಾಂತ್ಯ ಕರ್ಫ್ಯೂ ರದ್ದುಪಡಿಸಿದ್ದು, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳುವ ಜವಾಬ್ದಾರಿ ಹೆಚ್ಚಿದೆ ಎಂದು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಬೆಂಗಳೂರಿನಲ್ಲಿ ಇದೇ 29ರವರೆಗೆ ಶಾಲಾ-ಕಾಲೇಜುಗಳನ್ನು ಮುಚ್ಚಲು ನಿರ್ಧರಿಸಲಾಗಿದ್ದು, ಉಳಿದೆಡೆ ಕೋವಿಡ್ ಪ್ರಕರಣಗಳ ಸಂಖ್ಯೆಯನ್ನಾಧರಿಸಿ, ನಿರ್ಧರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಶಾಲೆಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಅಂತಹ ಶಾಲೆಗಳನ್ನು ಮೂರು ಅಥವಾ 7 ದಿನಗಳ ಕಾಲ ಬಂದ್ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

“ಸರ್ಕಾರದ  ಕೋವಿಡ್-‌19  ಸೋಂಕು  ನಿಯಂತ್ರಣ  ನಿಯಮಗಳನ್ನು  ಪಾಲಿಸಿ – ಇದು  ಸ್ಕೈ  ನ್ಯೂಸ್‌ RTWT  ಕಳಕಳಿ”

ಇದನ್ನೂ ನೋಡಿ

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news