ಸಂಕ್ಷಿಪ್ತ ಸುದ್ದಿ:
ಹುಬ್ಬಳ್ಳಿ: ಸ್ಥಳಿಯ ಎಸ್.ಡಿ.ಎಮ್ ಮೆಡಿಕಲ್ ಕಾಲೇಜಿನಲ್ಲಿ, ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರಾದ ಮಾನ್ಯ ಜಗದೀಶ್ ಶೆಟ್ಟರ್ ಅವರು, ನಿನ್ನೆ ಶುಕ್ರವಾರ ನೂತನ ಕೋವಿಡ್19 ಟೆಸ್ಟಿಂಗ್ ಲ್ಯಾಬ್ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್. ಮುಖ್ಯಸ್ಥರು ಹಾಗೂ ಸಿಬ್ಬಂದಿ ಹಾಜರಿದ್ದರು.

ನಂತರ ಹಿರಿಯ ವೈದ್ಯರಿಂದ ಹಾಗೂ ತಂತ್ರಜ್ಞರಿಂದ ಉಪಕರಣಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡರು.

ಉದ್ಘಾಟನಾ ಪೂರ್ವದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿಯವರೊಂದಿಗೆ, ಮಾನ್ಯ ಜಗದೀಶ್ ಶೆಟ್ಟರ್ ಅವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.