ಹುಬ್ಬಳ್ಳಿ –ಧಾರವಾಡ: ಮಾನ್ಯ ಕಾರ್ಮಿಕ ಹಾಗೂ ಸಕ್ಕರೆ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಇಂದು ಹುಬ್ಬಳ್ಳಿಯ ಕಾರ್ಮಿಕ ವಿಮಾ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವೈದ್ಯಕೀಯ ಪರಿಕರಗಳ ಹಾಗೂ ಔಷಧ ಸಂಗ್ರಹಾಗಾರಗಳ ಪರಿಶೀಲನೆ ನಡೆಸಿದರು.


ಆಸ್ಪತ್ರೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ವೇಳೆ ವೈದ್ಯಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು.


ಹಾಗೂ ಮಾನ್ಯ ಸಚಿವರು ಹುಬ್ಬಳ್ಳಿಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ಮುಖಂಡ ಹಾಗೂ ಕಾರ್ಯಕರ್ತರ ಜೊತೆಯಲ್ಲಿ ಪಕ್ಷ ಸಂಘಟನೆ ಕುರಿತು ಕೆಲಕಾಲ ಚರ್ಚಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು, ವಿವಿಧಸ್ತರದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.



ಮತ್ತು ಹುಬ್ಬಳ್ಳಿಯಲ್ಲಿ ಕಾರ್ಮಿಕ ಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಸಚಿವರು ಕಾಮಗಾರಿ ಪರಿಶೀಲನೆ ನಡೆಸಿ ಕಾಮಗಾರಿಯ ಸ್ಥಿತಿ ಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಪಡೆದು ಅತ್ಯಂತ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆದೇಶಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ನಂತರ ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿನ ಟಾಟಾ ಮಾರ್ಕೋಪೋಲೊ ಮತ್ತು ಟಾಟಾ ಹಿಟಾಚಿ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿ, ಕಾರ್ಮಿಕ ಸುರಕ್ಷತೆಗಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಹಾಗೂ ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಆಡಳಿತ ಮಂಡಳಿಯವರೊಂದಿಗೆ ಮಾನ್ಯ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಚರ್ಚಿಸಿದರು.

ಅಲ್ಲದೇ ಕಾರ್ಮಿಕರ ಅಹವಾಲನ್ನು ಸ್ವೀಕರಿಸಿ ಸರಕಾರ ತಿಳಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿ ಜಾಗೃತೆಯಿಂದ ಕಾರ್ಯನಿರ್ವಹಿಸುವಂತೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ಹಾಗೂ ಕಾರ್ಮಿಕರ ಹಾಜರಿದ್ದರು.


ಮತ್ತು ಧಾರವಾಡದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮಾನ್ಯ ಸಚಿವರು ಇಲಾಖೆಯ ಪ್ರಗತಿ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಕಾರ್ಮಿಕ ಸಂಘಟನೆಯ ಪ್ರಮುಖರು, ಕಾರ್ಮಿಕರು ಉಪಸ್ಥಿತರಿದ್ದರು.