ಸಂಕ್ಷಿಪ್ತ ಸುದ್ದಿ:
ಹುಬ್ಬಳ್ಳಿ: ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಇಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟಕ್ಕೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳೊಂದಿಗೆ ಸಭೆ ನಡೆಸಿ, ಬೆಟ್ಟದಲ್ಲಿರುವ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು.


ಹುಬ್ಬಳ್ಳಿಯ ರಾಜನಗರದ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣದ ಕಾಮಗಾರಿಯು ಪ್ರಗತಿಯಲ್ಲಿದ್ದು, ಇಂದು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.



ಹಾಗೂ ಹುಬ್ಬಳ್ಳಿಯ ಗುರುದೇವ ನಗರಕ್ಕೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಸಮುದಾಯ ಭವನದಲ್ಲಿ ಸಭೆ ನಡೆಸಿದ ಮಾನ್ಯ ಸಚಿವರು, ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಕೂಡಲೆ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಮತ್ತು ಹುಬ್ಬಳ್ಳಿಯ ಗುರುದೇವ ನಗರದಲ್ಲಿ, ಚರಂಡಿಗಳು ಕಿರಿದಾಗಿದ್ದು ಮಳೆಗಾಲ ಸಂದರ್ಭದಲ್ಲಿ ಚರಂಡಿಯ ಹೆಚ್ಚಿನ ನೀರು ಹರಿದು ಮನೆಗಳಿಗೆ ನುಗ್ಗಿ ತೊಂದರೆ ಉಂಟಾಗುತ್ತಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿ, ಮಳೆಗಾಲದಲ್ಲಿ ಚರಂಡಿ ನೀರಿನಿಂದ ಉಂಟಾಗುವ ತೊಂದರೆ ತಪ್ಪಿಸಲು, ಶೀಘ್ರವೇ ಸುಸಜ್ಜಿತವಾದ ಒಳಚರಂಡಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಹಾಗೂ ನಿವಾಸಿಗರು ಹಾಜರಿದ್ದರು.