ಸಧ್ಯದ ಸಂಕ್ಷಿಪ್ತ ಸುದ್ದಿ:
ರಾಯಚೂರು: ನಗರದ ಪೊಲೀಸ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವದ ರಾಷ್ಟ್ರೀಯ ಧ್ವಜಾರೋಹಣವನ್ನು ಮಾನ್ಯ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ನೆರವೇರಿಸಿದರು.

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ದದ್ದಲ್ ಬಸನಗೌಡ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿಯಾದ ಆರ್. ವೆಂಕಟೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಪ್ರಕಾಶ್ ನಿಕಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಿಕಾರಿಯಾದ ಸೇಖ್ ತನ್ವೀರ್ ಆಸಿಫ್ ಹಾಗೂ ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸೇರಿದಂತೆ ಹಲವು ಗಣ್ಯಮಾನ್ಯರು ಹಾಗೂ ಅಧಿಕಾರಿಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.