- ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಮುಂದಿನ 75 ದಿನಗಳವರೆಗೆ ಇಂದು ಪ್ರಾರಂಭಿಸಲಾದ ಉಚಿತ ಮುನ್ನೆಚ್ಚರಿಕೆ ಡೋಸ್ ಅಭಿಯಾನದ ಕುರಿತು ಬೆಳಿಗ್ಗೆ 11 ಗಂಟೆಗೆ ಎಲ್ಲಾ ರಾಜ್ಯಗಳು / ಯುಟಿಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.
- ಸಂಯೋಜಿತ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ- CUET-ಅಂಡರ್ ಗ್ರಾಜುಯೇಟ್-2022 ಇಂದಿನಿಂದ 500 ನಗರಗಳು ಮತ್ತು ದೇಶದ ಹೊರಗಿನ 10 ನಗರಗಳಲ್ಲಿ ಪ್ರಾರಂಭವಾಗುತ್ತಿದೆ. ಈ ಪರೀಕ್ಷೆಯು ಜುಲೈ 15, 16, 19, 20 ರಂದು ನಡೆಯಲಿದೆ.
- ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.
- ಭಾರತೀಯ ಮೂಲದ ರಿಷಿ ಸುನಕ್ ಅವರು ಯುಕೆ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ಎರಡನೇ ಸುತ್ತಿನ ಮತದಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ, ಎರಡನೇ ಸುತ್ತಿನ ಮತದಾನದಲ್ಲಿ ಅವರು 101 ಮತಗಳನ್ನು ಗಳಿಸಿದರು.
- ನಿನ್ನೆ ರಾತ್ರಿ ದೆಹಲಿಯಿಂದ ವಡೋದರಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಒಂದು ಸೆಕೆಂಡ್‌ನಷ್ಟು ಇಂಜಿನ್‌ಗಳಲ್ಲಿ ಕಂಪನದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೈಪುರಕ್ಕೆ ತಿರುಗಿಸಲಾಯಿತು. ತನಿಖೆಗೆ ಆದೇಶಿಸಲಾಗಿದೆ: ಡಿಜಿಸಿಎ
- ನಾಳೆ ಜುಲೈ 16 ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ.
- ವಿಶ್ವವಿದ್ಯಾಲಯಗಳ ಪದವಿ ಪ್ರವೇಶಕ್ಕೆ ಇಂದಿನಿಂದ ಕೇಂದ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ ಆರಂಭವಾಗಲಿದೆ. ಇದೇ ಪ್ರಥಮ ಬಾರಿಗೆ ಪದವಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಆಯೋಜಿಸಲಾಗುತ್ತಿದ್ದು, ವಿಶ್ವವಿದ್ಯಾಲಯ ಧನಸಹಾಯ ಆಯೋಗ-ಯುಜಿಸಿ ವತಿಯಿಂದ ನಡೆಯುತ್ತಿದೆ.
ಕರ್ನಾಟಕ:
- ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಆಗಸ್ಟ್ 5 ರಿಂದ 15ರವರೆಗೆ ಪಲಪುಷ್ಪ ಪ್ರದರ್ಶನ ಮತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
- ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್‌ಗೆ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ 50 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗಿದೆ.
- ತುರ್ತು ಕಾಮಗಾರಿ ಹಾಗೂ ಕೇಬಲ್‌ಗಳ ಅಳವಡಿಕೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಆಗಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
- ಬೆಂಗಳೂರು ಸಮೀಪದ ರೆಸಾರ್ಟ್‌ನಲ್ಲಿಂದು ಬಿಜೆಪಿ ಚಿಂತನಾ ಸಭೆ ನಡೆಯಲಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಸಭೆ ನಡೆಯಲಿದ್ದು, ವಿಧಾನಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
- ಗದಗ ಜಿಲ್ಲೆಯಲ್ಲಿ ಇದೇ 17 ರಂದು ರಾಷ್ಟ್ರೀಯ ಪರೀಕ್ಷಾ ಏಜನ್ಸಿ ವತಿಯಿಂದ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಸುತ್ತಿನ ಪರೀಕ್ಷೆಗಳು 4 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇತ್ತೀಚಿನ ಸಂಕ್ಷಿಪ್ತ ಸುದ್ದಿಗಳಿಗಾಗಿ “ಶೆರ್ ಚಾಟ್ʼʼ ‘ಫೇಸ್ ಬುಕ್ ಪೇಜ್ʼ ನಲ್ಲಿ ಫಾಲೋ ಮಾಡಿ