ರಾಷ್ಟ್ರೀಯ – ʼಮಹಾʼ ರಾಜಕೀಯ – ಇತ್ತೀಚಿನ – ಉದಯಪುರ
- ಇಂದು ಸಂಜೆ ಮುಂಬೈನ ಮಂತ್ರಾಲಯದಲ್ಲಿ ನಡೆಯಲಿರುವ ಸಂಪುಟ ಸಭೆಗಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ರಾಜ್ಯ ಸಚಿವ ಆದಿತ್ಯ ಠಾಕ್ರೆ ತಮ್ಮ ನಿವಾಸದಿಂದ ತೆರಳಿದ್ದಾರೆ.
- ಅಸ್ಸಾಂ: ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನಿಂದ ಮಹಾರಾಷ್ಟ್ರದ ಬಂಡಾಯ ಶಾಸಕರು ನಿರ್ಗಮಿಸಿದ್ದಾರೆ.
- “ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ 6 ಆಗಸ್ಟ್ 2022 ರಂದು ಚುನಾವಣೆ ನಡೆಯಲಿದೆ. ಜುಲೈ 5 ರಂದು ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಜುಲೈ 19ರವರೆಗೆ ನಾಮಪತ್ರ ಸಲ್ಲಿಸಬಹುದು”:_ ಚುನಾವಣಾ ಆಯೋಗ
- ರಾಜಸ್ಥಾನ | ಪೊಲೀಸರು, ಎನ್‌ಐಎ, ಎಸ್‌ಐಟಿ, ಎಫ್‌ಎಸ್‌ಎಲ್ ಮತ್ತು ಎಟಿಎಸ್ ತಂಡಗಳು ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಎಂಬ ಟೈಲರ್ ಹತ್ಯೆ ಮಾಡಿದ ಸ್ಥಳಕ್ಕೆ ತಲುಪಿವೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
- ಉದಯ್‌ಪುರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೈಪುರದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ.
- ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸಮೀಪ ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಸರಕು ಸಾಗಾಟ ಹಡಗಿನ ಸುತ್ತಮುತ್ತ ಮೀನುಗಾರಿಕೆ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
- ಉಚಿತ ಪಡಿತರ ಯೋಜನೆಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ:_ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
- ದೇಶದ 63,000 ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘಗಳನ್ನು ಕಂಪ್ಯೂಟರೀಕರಣಗೊಳಿಸಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
- ದೆಹಲಿ | ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮಾರಾಟದ ಮೇಲಿನ ನಿಯಂತ್ರಣವನ್ನು ರದ್ದುಗೊಳಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದು ಅಕ್ಟೋಬರ್ 2022 ರಿಂದ ಜಾರಿಗೆ ಬರಲಿದೆ. ಈಗ ಕಂಪನಿಗಳು ತಮ್ಮ ಕಚ್ಚಾ ತೈಲವನ್ನು ಸರ್ಕಾರಿ ಕಂಪನಿಗಳೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಯಾವುದೇ ಖಾಸಗಿ ಕಂಪನಿಗೆ ಮಾರಾಟ ಮಾಡಬಹುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

Follow us on GoogleNews