- ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ಸಂಜೆ ತೆರೆ: ಭಾರತ ಒಟ್ಟು 1 ಚಿನ್ನ, 2 ಬೆಳ್ಳಿ, 4 ಕಂಚಿನೊಂದಿಗೆ ತನ್ನ ಅಭಿಯಾನ ಪೂರ್ಣ. ಮುಂದಿನ ಒಲಿಂಪಿಕ್ಸ್ 2024ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿದೆ.
- ಮುದ್ದೇಬಿಹಾಳ: ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಆಕ್ಸಿಜನ್ ಘಟಕಕ್ಕೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಆಂಧ್ರಪ್ರದೇಶ: 2 ದಿನಗಳ ಭೇಟಿಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶಾಖಪಟ್ಟಣದ ನರಸೀಪೇಟೆಯಲ್ಲಿಂದು “ಆಜಾದಿ ಕಾ ಅಮೃತ ಮಹೋತ್ಸವ”ದ ಭಾಗವಾಗಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
- ರಾಯಚೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಖರೀದಿಸಲಾದ ಘನತ್ಯಾಜ್ಯ ಸಂಗ್ರಹಣಾ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ ಸೋಮಣ್ಣ ಅವರು ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನೆರವೇರಿಸಿದರು.
- ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ವಸತಿ ಸಚಿವ ವಿ ಸೋಮಣ್ಣ ಅವರು ಗುರು ರಾಯರ ಬೃಂದಾವನದ ದರ್ಶನ ಮಾಡಿದರು. ಬಳಿಕ ಶ್ರೀ ಸುಬುಧೇಂದ್ರತೀರ್ಥ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದರು.
- ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉತ್ತಮ ಪ್ರದರ್ಶನ ಮತ್ತು ಹೆಚ್ಚಿನ ರೋಗಿಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸಿದ ರಾಜ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಾಲಿನಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆ ಅಗ್ರಸ್ಥಾನ ಪಡೆದುಕೊಂಡಿದೆ.
- ರಾಜಸ್ಥಾನ: ಲೋಕಸಭಾ ಸ್ಪೀಕರ್ ಮತ್ತು ಕೋಟಾದ ಸಂಸದ ಓಂ ಬಿರ್ಲಾ ಕೋಟ-ಬುಂಡಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.
- ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಿಂದ 2 ಹೊಸ ಕೋರ್ಸ್‌ಗಳು ಆರಂಭವಾಗಲಿದೆ. ಡಾಟಾ ಸೈನ್ಸ್ ಅಂಡ್ ಅನಾಲಿಟಿಕ್ಸ್ ಮತ್ತು ಆರ್ಟಿಫಿಷಲ್ ಇಂಟಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ಕೋರ್ಸ್‌ಗಳು ಆರಂಭವಾಗಲಿದ್ದು, ಹೆಚ್ಚಿನ ಮಾಹಿತಿ ವಿಶ್ವವಿದ್ಯಾಲಯದಿಂದ ಪಡೆದುಕೊಳ್ಳಬಹುದು.
- ಪಶ್ಚಿಮ ಬಂಗಾಳ: ಭಾರತೀಯ ಸೇನೆಯ ಪ್ರವಾಹ ಪರಿಹಾರ ಕಾರ್ಯಾಚರಣೆ ನಿರಂತರವಾಗಿ ಮುಂದುವರಿದಿದೆ. ಭಾರತೀಯ ಸೇನೆಯ ಎಂಜಿನಿಯರ್ ಟಾಸ್ಕ್ ಫೋರ್ಸ್ ಹೂಗ್ಲಿ ಜಿಲ್ಲೆಯ ಖಂಕುಲ್ ಗ್ರಾಮದ ಪ್ರವಾಹ ಪೀಡಿತ ಗ್ರಾಮಸ್ಥರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು.
- “ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಚಳವಳಿಯ ಹೋರಾಟಗಾರರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್. ನಿಜಲಿಂಗಪ್ಪನವರ ಪುಣ್ಯತಿಥಿಯಂದು ಅವರಿಗೆ ಗೌರವ ಪ್ರಣಾಮಗಳು. ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ ಕ್ಷೇತ್ರಗಳೂ ಸೇರಿದಂತೆ ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ನಿಜಲಿಂಗಪ್ಪನವರ ಸಾಧನೆಗಳನ್ನು ದೇಶ ಎಂದೂ ಮರೆಯುವುದಿಲ್ಲ.”_ ಬಸವರಾಜ ಬೊಮ್ಮಾಯಿ, ಮಾನ್ಯ ಮುಖ್ಯಮಂತ್ರಿಗಳು.
