ಕಲಬುರ್ಗಿ: ವಿವಿಧ ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಸಂವಾದ ನಡೆಸಿದರು. ಈ ವೇಳೆ, ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಮತ್ತು ಶಿಕ್ಷಕರಿಗೆ ಅವರು ಸೂಚನೆ ನೀಡಿದರು. ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ , ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಳೀನ್ ಅತುಲ್, ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಚಿವ ನಾಗೇಶ್, ಶಾಲೆಗಳ ಆರಂಭದ ಮೊದಲ ದಿನವನ್ನು ಮಕ್ಕಳು ಮತ್ತು ಶಿಕ್ಷಕರು ಅತ್ಯಂತ ಉತ್ಸಾಹದಿಂದ ಸ್ವಾಗತಿಸಿ ಹಬ್ಬದಂತೆ ಸಂಭ್ರಮಿಸಿದ್ದಾರೆ. 1 ರಿಂದ 5ನೇ ತರಗತಿಯ ಆರಂಭಕ್ಕೆ ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎನ್ನುವುದಕ್ಕೆ ಇಂದಿನ ಬೆಳವಣಿಗೆಗಳು ಸಾಕ್ಷಿ ಎಂದರು ವಿದ್ಯಾಸಿರಿ ಯೋಜನೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ತಾತ್ಕಲಿಕವಾಗಿ ಸ್ಥಗಿತಗೊಂಡಿದೆ. ನವೆಂಬರ್ ಮೊದಲ ವಾರದಿಂದ ಶಾಲೆಗಳನ್ನು ಸಂಜೆವರೆಗೆ ನಡೆಸಲಾಗುತ್ತದೆ. ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಹೇಳಿದರು.

ಎಂ.ಬಿ ನಗರದ ಸರಕಾರಿ ‘ಕರ್ನಾಟಕ ಪಬ್ಲಿಕ್ ಶಾಲೆ’ಯಲ್ಲಿ

ಜಗತ್ ಪ್ರದೇಶದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ