Sunday, February 23, 2025

ಟಾಪ್ 10 ಸುದ್ದಿಗಳು !

  1. ಕುಷ್ಟಗಿ: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಬಳ್ಳಾರಿ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋವಿಡ್-19 ಮುಂಜಾಗ್ರತೆ  ಮತ್ತು  ಲಸಿಕೆ ಕುರಿತು ಜಾಗೃತಿ ಮೂಡಿಸಲಾಯಿತು.
  2. ಚಾಮರಾಜನಗರ: ಜಿಲ್ಲೆಯು ಮೊದಲಿನಿಂದಲೂ ರೇಷ್ಮೆ ಉದ್ಯಮಕ್ಕೆ ಹೆಸರುವಾಸಿಯಾಗಿದೆ. ಇಲ್ಲಿನ ರೇಷ್ಮೆ ನೇಕಾರರೊಬ್ಬರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ  ರಾಜ್ಯ ಮಟ್ಟದ (ರೇಷ್ಮೆ ವಿಭಾಗ) ಎರಡನೇ ಪ್ರಶಸ್ತಿ ಲಭಿಸಿದೆ. ಕೊಳ್ಳೆಗಾಲದ ಕೆಂಪನೆಪಾಳ್ಯದ ರಸ್ತೆಯ ನಿವಾಸಿ ಕೃಷ್ಣಮೂರ್ತಿ ರಾಜ್ಯ ಮಟ್ಟದ ಎರಡನೇ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಸುಮಾರು ಇಪ್ಪತ್ತೈದು ವರ್ಷಗಳಿಂದ ರೇಷ್ಮೆ ನೇಕಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ.
  3. ಮಸ್ಕಿ: ಸ್ಥಳಿಯ ಪೊಲೀಸ್‌ ಠಾಣಾ ವ್ಯಾಪ್ತಿಯ ಬೈಲಗುಡ್ಡಗ್ರಾಮದಲ್ಲಿ ERSS-112 ವಾಹನದ ಕರ್ತವ್ಯನಿರತ ಅಧಿಕಾರಿಗಳು ಸಾರ್ವಜನಿಕರಿಗೆ 112 ತುರ್ತು ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸಿ, ಯಾವುದೇ ತುರ್ತು ಸಂದರ್ಭದಲ್ಲಿ 112ಗೆ ಕರೆ ಮಾಡಲು ತಿಳಿಸಿದರು.
  4. ನವದೆಹಲಿ: ಸಂಸತ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಪತ್ರಿಕಾಘೋಷ್ಠಿ ನಡೆಯಿತು. ಈ ವೇಳೆ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ಭೂಪೇಂದ್ರ ಯಾದವ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
  5. ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಸಲ್ಲಿಸುವ ಸಲುವಾಗಿ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಿಲಿಟರಿ ಬ್ಯಾಂಡ್ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು.
  6. ಮೆಗಾ ವರ್ಚುಯಲ್ ಉದ್ಯೋಗಮೇಳ ದಿನಾಂಕ 11-08-2021 ರಿಂದ 20-08-2021ರವರೆಗೆ ನಡೆಯಲಿದ್ದು ಭಾರತದ ಬಹುದೊಡ್ಡ ಮಾನ್ಯುಫ್ಯಾಕ್ಚರಿಂಗ್ ಕಂಪೆನಿಗಳ ವಿವಿಧ ಹುದ್ದೆಗಳಿಗೆ ವರ್ಚುಯಲ್ ಸಂದರ್ಶನವನ್ನು ಆಯೋಜಿಸಲಾಗಿದೆ.”_ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ.
  7. ರಾಮನಗರ: ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ದಿನಾಂಕ 13-08-2021 ರಂದು ಮಿನಿ ಉದ್ಯೋಗ‌ಮೇಳವನ್ನು ಏರ್ಪಡಿಸಲಾಗಿದೆ. ಸ್ಥಳ: ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಾರ್ಯಾಲಯ, ಪ್ರಕಾಶ ಚಂದ್ರ ಕಾಂಪ್ಲೆಕ್ಸ್‌, ಕೆ ಎಸ್‌ ಆರ್‌ ಟಿ ಸಿ ಬಸ್‌ ಡಿಪೋ ಎದುರು, ಅರ್ಚಕರ ಹಳ್ಳಿ , ಬಿ ಎಂ ರಸ್ತೆ, ರಾಮನಗರ.
  8. ನೀತಿ ಆಯೋಗ :  * ಭಾರತದಲ್ಲಿ ವಿದ್ಯುತ್ ವಾಹನ (ಇವಿ) ಚಾರ್ಜಿಂಗ್ ಮೂಲಸೌಕರ್ಯಕ್ಕೆ ಮಾರ್ಗದರ್ಶನ ನೀಡಲು ಕೈಪಿಡಿ ಬಿಡುಗಡೆ ಮಾಡಿದ ನೀತಿ ಆಯೋಗ.    *ಸಾರ್ವಜನಿಕ ಚಾರ್ಜಿಂಗ್ ಜಾಲವನ್ನು ಸಮರ್ಥವಾಗಿ ಸ್ಥಾಪಿಸಲು ರಾಜ್ಯಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಈ ಕೈಪಿಡಿಯು ಅನುವು ಮಾಡಿಕೊಡುತ್ತದೆ. *ಚಾರ್ಜಿಂಗ್ ಮೂಲಸೌಕರ್ಯವನ್ನು ಹೆಚ್ಚಿಸುವುದು ಹಾಗೂ ದೇಶದಲ್ಲಿ ವಿದ್ಯುತ್ ಚಾಲಿತ ಸಾರಿಗೆ ವ್ಯವಸ್ಥೆಯತ್ತ ತ್ವರಿತ ಪರಿವರ್ತನೆಗೆ ಅನುಕೂಲ ಮಾಡಿಕೊಡುವುದು ಇದರ ಉದ್ದೇಶವಾಗಿದೆ.
  9. ಮಂಗಳೂರು: ಜಿಲ್ಲಾಮಟ್ಟದ ‘ಡಾ|| ಬಿ.ಆರ್.ಅಂಬೇಡ್ಕರ್ ಭವನ’ದ ನೂತನ ಕಟ್ಟಡವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇಂದು ಲೋಕಾರ್ಪಣೆ ಮಾಡಿದರು ಹಾಗೂ ವೆನ್ಲಾಕ್ ಆಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನವಾಗಿ ನಿರ್ಮಿಸಲಾದ 32 ಹಾಸಿಗೆಗಳ ಐಸಿಯು ಘಟಕವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿ ವರ್ಗದವರು ಹಾಜರಿದ್ದರು.
  10. ಉಡುಪಿ: 250 ಹಾಸಿಗೆಗಳ ಸಾಮರ್ಥ್ಯದ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡಕ್ಕೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಂಕು ಸ್ಥಾಪನೆ ‌ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news