ನ್ಯೂಸ್ ಲೈನ್ !
ಏಪ್ರಿಲ್ 22 ರಿಂದ ಮೇ 18 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಹಿಂದಿರುಗಲು ಕೆಕೆಆರ್ ಟಿಸಿ ನಿಗಮದ ನಗರ, ಹೊರಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಸುಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆಯೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.