ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ 2022-23ನೇ ಸಾಲಿನ ‘ಮದ್ಯವರ್ಜಿತರ ಕೌಟುಂಬಿಕ ಸಮ್ಮಿಲನ ಹಾಗೂ ನವಜೀವನ’ ಸಮಾವೇಶಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಥಾವರ್ ಚಂದ್ ಗೆಹ್ಲೋಟ್, ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಜನಜಾಗೃತಿ ಅಭಿಯಾನದ ಪ್ರಾಮುಖ್ಯತೆ ಅತ್ಯವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಮಹಿಳೆಯರ ಸಬಲೀಕರಣದಿಂದ ಸಶಕ್ತ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ತಿಳಿಸಿದರು.
ಆರೋಗ್ಯಕರ ಸಮಾಜಕ್ಕಾಗಿ ಮಾದಕ ವ್ಯಸನ ಮುಕ್ತ ಭಾರತ ನಿರ್ಮಾಣ ಪ್ರತಿಯೊಬ್ಬ ಯುವಜನತೆಯ ಗುರಿಯಾಗಬೇಕು ಎಂದರು.

ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಸಾರ, ಸಮಾಜ, ರಾಜ್ಯ ಸುಭೀಕ್ಷವಾಗಿರಬೇಕಾದರೆ ಕುಟುಂಬದ ಸದಸ್ಯರು ಸಂತಸದಿಂದಿರುವುದು ಮುಖ್ಯವಾಗುತ್ತದೆ. ಸ್ವಸ್ಥ ನಾಡಿಗೆ ವ್ಯಸನ ಮುಕ್ತ ಸಮಾಜ ಅತ್ಯವಶ್ಯವಾಗಿದೆ ಎಂದು ತಿಳಿಸಿದರು.
ಈ ವೇಳೆ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ, S.D.M.E.ಸೊಸೈಟಿ ಯ ಕಾರ್ಯದರ್ಶಿ ಡಾ.ಹರ್ಷೇಂದ್ರ ಕುಮಾರ್, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷ ರಾಜಣ್ಣ M.ಕೊರವಿ, ಜ್ಞಾನ ವಿಕಾಸ ಮಹಿಳಾ ಸಶಕ್ತ ಕಾರ್ಯಕ್ರಮಗಳ ಅಧ್ಯಕ್ಷೆ ಡಾ. ಹೇಮಾವತಿ ಹೆಗ್ಗಡೆ ಮತ್ತಿತರರು ಉಪಸ್ಥಿತರಿದ್ದರು.
_CLICK to Follow-Support us on DailyHunt