ಕರ್ನಾಟಕ – ಆಸ್ಸಾಂ – ರಫ್ತು – ಪೆಟ್ರೋಲ್ ಡಿಸೇಲ್ ಬೆಲೆ:
- ಕೋವಿಡ್-19 4ನೇ ಅಲೆಯ ಭೀತಿ ಹಿನ್ನೆಲೆ ಬೆಂಗಳೂರಿನಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದಿದ್ದವರಿಗೆ ಮೇ 2 ರಿಂದ 250 ರೂಪಾಯಿ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
- ಬೀದರ್‌ನ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಇಂದು ನಡೆಯಲಿದೆ. ಶಿವಮೊಗ್ಗದ ಪಶುವೈದ್ಯಕೀಯ ವಿದ್ಯಾಲಯದ ವಿದ್ಯಾರ್ಥಿನಿ ಕನಿಕಾ ಯಾದವ್ 13 ಹಾಗೂ ಬೆಂಗಳೂರಿನ ಕಿರಣ್ ದರೂರು 9 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಪದವಿ ಪ್ರದಾನ ಮಾಡುವರು.
- ಬೆಳಗಾವಿ ರೈಲು ನಿಲ್ದಾಣದಲ್ಲಿ ಸಿಗ್ನಲ್ ಕಾಮಗಾರಿ ನಿರ್ವಹಿಸಲು ಮೈಸೂರಿನಿಂದ ಬೆಂಗಳೂರು ಮಾರ್ಗದಲ್ಲಿ ಬೆಳಗಾವಿಗೆ ಹೋಗುವ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮೇ 5 ರವರೆಗೆ ನೈರುತ್ಯ ರೈಲ್ವೆ ರದ್ದುಪಡಿಸಿದೆ. ರೈಲು ಸಂಚಾರ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ರೈಲ್ವೆ ಪ್ರಕಟಣೆ ಕೋರಿದೆ.
- ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವ ನಾಳೆ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುವರು. ಒಟ್ಟು 321 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 132 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ 127 ಅಭ್ಯರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.
- ಶನಿವಾರ ದೆಹಲಿಯಲ್ಲಿ ನಡೆಯಲಿರುವ ಎಲ್ಲ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಲಿದ್ದಾರೆ.
- ಅಸ್ಸಾಂ | ದಿಫುದಲ್ಲಿ ಪಶುವೈದ್ಯಕೀಯ ಕಾಲೇಜು, ಪಶ್ಚಿಮ ಕರ್ಬಿ ಆಂಗ್ಲಾಂಗ್‌ನಲ್ಲಿ ಪದವಿ ಕಾಲೇಜು ಮತ್ತು ಕೊಲೊಂಗಾದಲ್ಲಿ ಕೃಷಿ ಕಾಲೇಜು ಸೇರಿದಂತೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದರು.
- ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಇಂದಿನಿಂದ ಬಾಂಗ್ಲಾದೇಶ ಮತ್ತು ಭೂತಾನ್ ಗೆ 3 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
- ತಮಿಳುನಾಡು ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಅವರು ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಕಡಿಮೆ ಮಾಡಲು ಮತ್ತು ಅವುಗಳನ್ನು ಮೂಲ ತೆರಿಗೆ ದರಗಳೊಂದಿಗೆ ವಿಲೀನಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ; ಕೇಂದ್ರ ತೆರಿಗೆಯ ಆದಾಯದಿಂದ ರಾಜ್ಯಗಳು ತಮ್ಮ ಪಾಲನ್ನು ಪಡೆಯಲು ವಿಲೀನವು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
- ಭಾರತೀಯ ರಾಸಾಯನಿಕಗಳ ರಫ್ತು 2013-14ಕ್ಕಿಂತ 2021-22ರಲ್ಲಿ 106% ಬೆಳವಣಿಗೆಯನ್ನು ದಾಖಲಿಸಿದೆ. 2021-22ರಲ್ಲಿ ಭಾರತದ ರಾಸಾಯನಿಕಗಳ ರಫ್ತು ದಾಖಲೆಯ 29,296 ಮಿಲಿಯನ್ ಯುಎಸ್ ಡಾಲರ್‌ಗೆ ತಲುಪಿದೆ, ಆದರೆ 2013-14 ರಲ್ಲಿ ಭಾರತದ ರಾಸಾಯನಿಕ ರಫ್ತು 14,210 ಮಿಲಿಯನ್ ಯುಎಸ್ ಡಾಲರ್‌ಗಳಷ್ಟಿತ್ತು.