ಇತ್ತೀಚಿನ – ಕೋವಿಡ್ 19 ಲಸಿಕೆ – ಚುನಾವಣೆ – ಶ್ರೀಲಂಕಾ – ಕ್ರೀಡೆ:
- ಸ್ನಾತಕೋತ್ತರ (NEET-PG 2022) ಪರೀಕ್ಷೆಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
- 2022 ರ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನ ಮಾಡಲಾಗುವ ರಾಷ್ಟ್ರಪತಿಗಳ ಪೊಲೀಸ್ ಪದಕ (PPM) ಪ್ರಶಸ್ತಿಗಾಗಿ, ಮೇ 15, 2022 ರೊಳಗೆ ಹೆಸರುಗಳನ್ನು ಶಿಫಾರಸು ಮಾಡಲು ಗೃಹ ವ್ಯವಹಾರಗಳ ಸಚಿವಾಲಯ ಎಲ್ಲಾ ರಾಜ್ಯಗಳು, UTಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಕೇಂದ್ರ ಏಜೆನ್ಸಿಗಳಿಗೆ ಪತ್ರ ಬರೆದಿದೆ. Source:ANI
- ಇಲ್ಲಿಯವರೆಗೆ, ದೇಶದಲ್ಲಿ 190 ಕೋಟಿ 99 ಲಕ್ಷಕ್ಕೂ ಹೆಚ್ಚು ಕೋವಿಡ್ ವಿರೋಧಿ ಲಸಿಕೆಗಳನ್ನು ನೀಡಲಾಗಿದೆ. ನಿನ್ನೆ 14 ಲಕ್ಷ ಮೂರು ಸಾವಿರಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಪ್ರಸ್ತುತ, ದೇಶದಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುವ ಪ್ರಮಾಣ 98.74% ಆಗಿದೆ.
- ಮಧ್ಯಪ್ರದೇಶ ಸ್ಟಾರ್ಟ್ ಅಪ್ ನೀತಿಯನ್ನು ಮಧ್ಯಪ್ರದೇಶ ಸ್ಟಾರ್ಟ್ ಅಪ್ ಸೆಮಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ.
- ಪ್ರಸ್ತುತ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.
- ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ಕೆ.ಸಿ. ರಾಮಮೂರ್ತಿ, ಜೈರಾಮ್ ರಮೇಶ್, ಆಸ್ಕರ್ ಫರ್ನಾಂಡೀಸ್ ಮತ್ತು ನಿರ್ಮಲಾ ಸೀತಾರಾಮನ್ ಅವರ ಅವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದೆ. ಮೇ 24ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಮೇ 31 ಕೊನೆಯ ದಿನಾಂಕ.
- ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯ ಸಭೆಯ 57 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಈ ಸಂಬಂಧ ವೇಳಾಪಟ್ಟಿ ಪ್ರಕಟಿಸಿದೆ.
- ಶ್ರೀಲಂಕಾ: ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು 5 ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೊಲಂಬೊದಲ್ಲಿ ಯುನೈಟೆಡ್ ನ್ಯಾಶನಲ್ ಪಕ್ಷದ ನಾಯಕನಿಗೆ ಅಧ್ಯಕ್ಷ ಗೊಟಬಯ ರಾಜಪಕ್ಸೆ ಪ್ರಮಾಣ ವಚನ ಬೋಧಿಸಿದರು. ಅಧ್ಯಕ್ಷ ಗೋತಬಯ ರಾಜಪಕ್ಸೆ ವಿರುದ್ಧದ ಅವಿಶ್ವಾಸ ನಿರ್ಣಯವು ಮೇ 17 ರಂದು ಚರ್ಚೆಗೆ ಬರಲಿದೆ.
- ಶ್ರೀಲಂಕಾದ ಭಾರತದ ಹೈಕಮಿಷನರ್ ಗೋಪಾಲ್ ಬಾಗ್ಲೆ ಅವರು ಕೊಲಂಬೊದಲ್ಲಿ ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಭೇಟಿಯಾದರು.
- ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಇಂದಿನಿಂದ ಮೂರು ದಿನಗಳ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ವಾಸ್ತವ್ಯದ ಅವಧಿಯಲ್ಲಿ ಅವರು ಚಂಬಾ, ಧರ್ಮಶಾಲಾ ಮತ್ತು ಬಿಲಾಸ್‌ಪುರದಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
- ಭಾರತ ಪುರುಷರ ಬ್ಯಾಡ್ಮಿಂಟನ್ ತಂಡ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಬಾರಿಗೆ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. ಕ್ವಾರ್ಟರ್ ಫೈನಲ್‌ನಲ್ಲಿ ಮಲೇಷ್ಯಾವನ್ನು ಸೋಲಿಸಿತು.
- IPL 2022: ಕಳೆದ ರಾತ್ರಿ ಐಪಿಎಲ್ 2022 ಕ್ರಿಕೆಟ್‌ನಲ್ಲಿ ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಐದು ವಿಕೆಟ್‌ಗಳಿಂದ ಸೋಲಿಸಿತು. ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ರಾತ್ರಿ 7:30 ರಿಂದ ಪಂದ್ಯ ನಡೆಯಲಿದೆ.