ಕ್ರೀಡೆ – ಇತ್ತೀಚಿನ – ರಾಜಕೀಯ
- ದೆಹಲಿ | ರೋಸ್ ಅವೆನ್ಯೂ ನ್ಯಾಯಾಲಯವು ಎಎಪಿ ನಾಯಕ ಮತ್ತು ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. Source:ANI
- ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಪ್ರಧಾನಮಂತ್ರಿ ಅವರು ಪುಣೆಯ ದೇಹುವಿನಲ್ಲಿ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.
- ದೆಹಲಿ | ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಂದು ಇಡಿ ಮುಂದೆ ಹಾಜರಾಗುವ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿವಾಸದ ಹೊರಗೆ ಪೊಲೀಸರ ನಿಯೋಜನೆ ಮಾಡಲಾಗಿದೆ.
- ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಂದು ಇಡಿ ಮುಂದೆ ಹಾಜರಾಗುವ ಮುನ್ನ, ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
- ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಈ ತಿಂಗಳೊಳಗೆ ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸಲಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.
- ಕರ್ನಾಟಕ: ಕಬಿನಿಯ ತಟದಲ್ಲಿದ್ದ ಏಷ್ಯಾದ ಅತಿ ಉದ್ದದ ದಂತ ಹೊಂದಿದ್ದ ಐತಿಹಾಸಿಕವಾಗಿದ್ದ “ಭೋಗೇಶ್ವರ” ಆನೆ ಇನ್ನಿಲ್ಲ.
- ವಿಶೇಷ ಟ್ರಾಫಿಕ್ ವ್ಯವಸ್ಥೆಯಿಂದಾಗಿ ನವದೆಹಲಿಯಲ್ಲಿ ಗೋಲ್ ದಕ್ ಖಾನಾ ಜಂಕ್ಷನ್, ಪಟೇಲ್ ಚೌಕ್, ವಿಂಡ್ಸರ್ ಪ್ಲೇಸ್, ತೀನ್ ಮೂರ್ತಿ ಚೌಕ್ ಮತ್ತು ಪೃಥ್ವಿರಾಜ್ ರಸ್ತೆಯ ಆಚೆಗೆ ಬಸ್‌ಗಳ ಒಳಮುಖ ಚಲನೆಯನ್ನು ನಿರ್ಬಂಧಿಸಲಾಗುವುದು ಎಂದು ದೆಹಲಿ ಟ್ರಾಫಿಕ್ ಪೊಲೀಸರು ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.
- 2ನೇ ಟಿ-20: ಕಟಕ್‌ನ ಬಾರಾಬತಿ ಸ್ಟೇಡಿಯಂನಲ್ಲಿ ಭಾರತವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ, 5 ಪಂದ್ಯಗಳ ಸರಣಿಯಲ್ಲಿ 2.0 ಮುನ್ನಡೆ ಸಾಧಿಸಿದೆ.
- ಫ್ರಾನ್ಸ್ ನ ಚೆಟೌರೊಕ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವ ಕಪ್ ನಲ್ಲಿ ಮನೀಶ್ ನರ್ವಾಲ್ , ಸಿಂಘ್ರಾಜ್ ಅಧಾನ ಮತ್ತು ನಿಹಾಲ್ ಸಿಂಗ್ ಒಳಗೊಂಡ ಭಾರತ ತ್ರಿಸದಸ್ಯರ ತಂಡ ನಿನ್ನೆ ಪಿ1 ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದೆ.
- ಹರಿಯಾಣದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂತ್ ಗೇಮ್ಸ್ 2021ರ ಪದಕ ಪಟ್ಟಿಯಲ್ಲಿ ನಿನ್ನೆಯ ಅಂತ್ಯಕ್ಕೆ ಹರಿಯಾಣ ಅಗ್ರಸ್ಥಾನ ಗಳಿಸಿದೆ. 41 ಚಿನ್ನ, 35 ಬೆಳ್ಳಿ 42 ಕಂಚು ಸೇರಿದಂತೆ ಒಟ್ಟಾರೆ 118 ಪದಕ ಗೆದ್ದು ಮೊದಲ ಸ್ಥಾನ ಪಡೆದಿದೆ.
- ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ವಾರ್ಷಿಕ ಬೇಸಿಗೆ ರಜೆಯ ನಂತರ ತಮಿಳುನಾಡು ಮತ್ತು ತೆಲಂಗಾಣದಲ್ಲಿ ಶಾಲೆಗಳು ಇಂದು ಪ್ರಾರಂಭವಾಗಿವೆ.
- ಇಂದು ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ. ವಾಯವ್ಯ ಮತ್ತು ದಕ್ಷಿಣ ಪದವೀಧರ ಕ್ಷೇತ್ರಗಳು ಮತ್ತು ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ.
- ಮುಂಬರುವ ರಾಷ್ಟ್ರಪತಿ ಚುನಾವಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲು, ಭಾರತೀಯ ಜನತಾ ಪಕ್ಷ ತನ್ನ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಅಧಿಕಾರ ನೀಡಿದೆ.
- ಮುಂದಿನ ಎರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ದೆಹಲಿ ಮತ್ತು ಆಗ್ನೇಯ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ, ಬಿಸಿಗಾಳಿ, ಉಷ್ಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

CLICK to Follow on GoogleNews