ಸಂಕಿಪ್ತ ಸುದ್ದಿ:
ಬೆಂಗಳೂರು: ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಕಛೇರಿಗಳು ಒಂದೇ ಸೂರಿನಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಅನುಕೂಲವಾಗಲು ನೂತನವಾಗಿ ನಿರ್ಮಿಸಲಾಗಿರುವ ‘ಆರೋಗ್ಯ ಸೌಧ’ ವನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು.




ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಯವರಾದ ಗೋವಿಂದ ಕಾರಜೋಳ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಕೆ ಸುಧಾಕರ್, ಆರೋಗ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿಯಾದ ಜಾವೇದ್ ಅಖ್ತರ್ ಸೇರಿದಂತೆ ಇಲಾಖಾ ಸಂಬಂಧಿತ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.