ಉಳ್ಳಾಲ: ಮಂಗಳಗಂಗೋತ್ರಿ ವಿಶ್ವವಿದ್ಯಾಲಯದಲ್ಲಿಂದು ನಡೆದ 41ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಘಟಿಕೋತ್ಸವದಲ್ಲಿ 55 ಮಹಿಳೆಯರು ಸೇರಿ ಒಟ್ಟು 115 ಮಂದಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.

55 ಮಂದಿಗೆ ಚಿನ್ನದ ಪದಕ, 57 ನಗದು ಬಹುಮಾನ, ವಿವಿಧ ಕೋರ್ಸುಗಳ ಒಟ್ಟು 199 Rank ಪಡೆದ ವಿದ್ಯಾರ್ಥಿಗಳ ಪೈಕಿ ಪ್ರಥಮ ಶ್ರೇಣಿ ಪಡೆದ 71ಮಂದಿಗೆ ಪ್ರಮಾಣ ಪತ್ರ ನೀಡಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆತ್ಮ ನಿರ್ಭರ ಭಾರತ ಮಾಡಲು ಸರಕಾರ ಯೋಚಿಸುತ್ತಿದೆ, ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಅದನ್ನು ಸಾಕಾರ ಗೊಳಿಸಲು ಎಲ್ಲರ ಸಹಕಾರ ಅಗತ್ಯ. ಸ್ಥಳೀಯ ಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ನೀಡಲು ಕರ್ನಾಟಕ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಎಂದರು.