ಸಧ್ಯದ ಸಂಕ್ಷಿಪ್ತ ಸುದ್ದಿ:
ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಅಲ್ಲದೇ ಮಳೆ ಬಗ್ಗೆ ಕ್ಷಣಕ್ಷಣದ ಮಾಹಿತಿ ತೆಗೆದುಕೊಳ್ಳುವುದು ಸೇರಿದಂತೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರಲು ಸೂಚನೆ ನೀಡಿದ್ದಾರೆ.
ಹಾಗೂ ತುರ್ತು ಸಂದರ್ಭಕ್ಕಾಗಿ ಕೂಡಲೇ 50 ಕೋಟಿ ರೂ. ಹಣವನ್ನು ಬಿಡುಗಡೆಗೊಳಿಸುವಂತೆ ಸೂಚನೆ ನೀಡಿದಲ್ಲದೆ, ಕೆಲ ಜಿಲ್ಲಾಧಿಕಾರಿಗಳ ಜೊತೆ ಪೋನ್ ಮುಖಾಂತರ ಸಂಪರ್ಕ ಮಾಡಿದ ಮುಖ್ಯಮಂತ್ರಿಗಳು ಮಳೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರುವ ಬಗ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.