ಸಂಕ್ಷಿಪ್ತ ಸುದ್ದಿ:
ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಕಲ್ಬುರ್ಗಿ ಹಾಗೂ ಬೀದರ್ ಜಿಲ್ಲೆಯಾದ್ಯಂತ ಇಂದು ಕೈಗಾರಿಕಾ ಪ್ರವಾಸ ಕೈಗೊಂಡಿದ್ದರು.
ಕಲ್ಬುರ್ಗಿ:

ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕಲಬುರ್ಗಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಇವರುಗಳ ಸಹಯೋಗದೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾನ್ಯ ಸಚಿವರು, ಜಿಲ್ಲೆಯ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ನಡೆಸಿ, ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಥಳೀಯ ಸ್ಥಿತಿಗತಿಗಳ ಕುರಿತು ಚರ್ಚಿಸಿದರು.

ಹಾಗೂ ಜಿಲ್ಲೆಯ ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ದಾಲ್ ಮಿಲ್ ಗಳಿಗೆ ಭೇಟಿ ನೀಡಿ, ತೊಗರಿ ಬೇಳೆ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.
ಬೀದರ್:
ಮತ್ತು ಬೀದರ್ ಜಿಲ್ಲೆಯ ಕೈಗಾರಿಕಾ ಪ್ರವಾಸ ಕೈಗೊಂಡು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೀದರ್ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳ ಜತೆ ಸಂವಾದ ನಡೆಸಿದ ಮಾನ್ಯ ಸಚಿವರು, ಸ್ಥಳೀಯ ಸಮಸ್ಯೆಗಳು ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ರಾಜಕೀಯ ಹಿರಿಯ ಗಣ್ಯರು, ಇಲಾಖಾ ಸಂಬಂಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.