ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿ ಶ್ರೀಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಮಾಜಿ ಸಂಸದರಾದ ಹಾಗೂ ಕೃಷಿ ಮತ್ತು ಸಾಂಸ್ಕೃತಿಕ ಸಹಾಯಕ ಶ್ರೀ ಬಸವರಾಜ್ ಪಾಟೀಲ್ ಸೇಡಂ ಅವರು ಮಂಡಿಸಿದ ಅಭಿವೃದ್ಧಿ ಯೋಜನೆಗಳ ನೀಲಿನಕ್ಷೆ ಕುರಿತು ಮಾನ್ಯ ಮುಖ್ಯಮಂತ್ರಿಗಳು ಚರ್ಚಿಸಿದರು.
ಮುಖ್ಯಮಂತ್ರಿ ಶ್ರೀ ಬಿ.ಎಸ್.ವೈ. ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತಂತೆ ನಡೆಸಿದ ಸಭೆಯಲ್ಲಿ ಮಾಜಿ ಸಂಸದ ಬಸವರಾಜ್ ಪಾಟೀಲ್ ಸೇಡಂರವರು ಮಂಡಿಸಿದ ಅಭಿವೃದ್ಧಿ ಯೋಜನೆಗಳ ನೀಲಿನಕ್ಷೆಗೆ ಒಪ್ಪಿಗೆ ಸೂಚಿಸಿರುವ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಂತಹಂತವಾಗಿ ಹಣಕಾಸು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಹಾಗು ಸಾಂಸ್ಕೃತಿಕ ಸಂಘದ ಅಧ್ಯಕ್ಷರು ಹಾಗು ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಮ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.