ಬಳ್ಳಾರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಮಾನ್ಯ ಬಿ.ಶ್ರೀರಾಮುಲು, ಅವರು ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ಹಾಗೆಯೇ, ಇತ್ತೀಚೆಗೆ ಕೋವಿಡ್-19 ದಿಂದ ಮೃತಪಟ್ಟವರ ಶವ ಸಂಸ್ಕಾರವನ್ನು ಶಿಷ್ಟಾಚಾರ ಪಾಲಿಸದೆ ನಡೆಸಿದ ಪ್ರಕರಣದ ಬಗ್ಗೆ ಮಾಹಿತಿ ಪಡೆದರು.

ಇಂತಹ ಪ್ರಕರಣಗಳು ಮತ್ತೊಮ್ಮೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.