ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಪೊಲೀಸ್ ವಸತಿಗೃಹ, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್ ಲೆಸ್ ತರಬೇತಿ ಶಾಲೆಯನ್ನು ಗೃಹ ಕಚೇರಿ ಕೃಷ್ಣಾದಲ್ಲಿಆನ್ ಲೈನ್ ಮೂಲಕ ಉದ್ಘಾಟಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.