ಮೈಸೂರು: ಪ್ರಸಕ್ತ ವಿಶ್ವವಿಖ್ಯಾತ ದಸರಾ ಮಹೋತ್ಸವವು ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆದಿದ್ದು, ಮುಂದಿನ ವರ್ಷ ಕೋವಿಡ್ ಮುಕ್ತ ವಾತಾವರಣದಲ್ಲಿ ಅದ್ಧೂರಿ ದಸರಾ ಆಚರಣೆಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿನಲ್ಲಿಂದು ತಿಳಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ , ದಸರಾ ಸಂದರ್ಭದಲ್ಲಿ ಮೈಸೂರು ಕ್ಷೇತ್ರದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಚಿಂತಿಸಲಾಗಿದ್ದು, ಸಮಗ್ರ ಅಭಿವೃದ್ಧಿಗೆ ಕಾರ್ಯ ಯೋಜನೆ ರೂಪಿಸಲಾಗುವುದು ಎಂದರು. ವರ್ಷಪೂರ್ತಿ ದಸರಾ ವಸ್ತುಪ್ರದರ್ಶನ ನಡೆಸುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಮೈದಾನವನ್ನು ನಿರ್ಮಾಣ ಮಾಡಲು ಚಿಂತಿಸಿದ್ದು, ನುರಿತ ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
