- ಬರ್ಮಿಂಗ್ ಹ್ಯಾಮ್‌ನಲ್ಲಿ ಇಂದಿನಿಂದ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಆರಂಭವಾಗಲಿದೆ. ಖ್ಯಾತ ಆಟಗಾರರಾದ ಪಿ.ವಿ.ಸಿಂಧು, ಸೈನಾನೆಹ್ವಾಲ್, ಲಕ್ಷ್ಯಾಸೇನ್, ಕಿಡಂಬಿ ಶ್ರೀಕಾಂತ್ ಸೇರಿದಂತೆ ಹಲವು ಆಟಗಾರರು ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ.
- ಸಾಮಾನ್ಯ ಬೌದ್ಧ ಪರಂಪರೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನ ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಆರಂಭವಾಗಲಿದೆ. ಶಾಂಘೈ ಸಹಕಾರ ಸಂಸ್ಥೆ (SCO) ರಾಷ್ಟ್ರಗಳೊಂದಿಗೆ 2023 ರ ವೇಳೆಗೆ ಭಾರತದ ನಾಗರಿಕತೆಯ ಸಂಪರ್ಕವನ್ನು ಕೇಂದ್ರೀಕರಿಸಿ ಇದನ್ನು ಆಯೋಜಿಸಲಾಗಿದೆ.
- ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಒಳಗಾಗಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಮಲೆನಾಡು ಹಾಗೂ ಕರಾವಳಿಯಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕಾಳ್ಗಿಚ್ಚು ನಿಯಂತ್ರಿಸಲು ಜಿಲ್ಲೆಯ ಪರಿಸರ ಹಾಗೂ ಜೀವಶಾಸ್ತ್ರ ತಜ್ಞರು ಕೆಲವು ನಿಯಂತ್ರಣಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
- ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 941.04 ಕೋಟಿ ರೂಪಾಯಿ ಬಿಡುಗಡೆ ಮಾಡಲು ತೀರ್ಮಾನಿಸಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.
- 57 ಸಿವಿಲ್ ನ್ಯಾಯಾಧೀಶರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ.
- ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿರುವ ಮೇದಾರ ಸಮುದಾಯದ ಅಭಿವೃದ್ಧಿ ಉದ್ದೇಶದಿಂದ ‘ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ’ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- ಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧಪಡಿಸಿರುವ 108 ಅಡಿ ಎತ್ತರದ ಮಹದೇಶ್ವರ ಸ್ವಾಮಿಯ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 18ರಂದು ಅನಾವರಣಗೊಳಿಸಲಿದ್ದಾರೆ. ಪ್ರತಿಮೆಯ ಅಡಿಪಾಯದ ಬಂಡೆಯನ್ನು ಗುಹೆಯ ಮಾದರಿಯಲ್ಲಿ ನಿರ್ಮಿಸಲಾಗಿದೆ.
- ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಮುಗಿದ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆಡುವುದು ದೊಡ್ಡ ಸವಾಲಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.
- 2017-18ನೇ ಹಣಕಾಸು ವರ್ಷದಿಂದೀಚೆಗೆ ದೇಶದಿಂದ ಸುಮಾರು 59 ಸಾವಿರ ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ರಾಜ್ಯಸಭೆಗೆ ತಿಳಿಸಿದ್ದಾರೆ.
- ಭಾರತೀಯ ರೈಲ್ವೆವಿಶ್ವದಲ್ಲೇ ಅತಿ ದೊಡ್ಡ ಹಸಿರು ರೈಲ್ವೆ ಆಗಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು 2030ರ ವೇಳೆಗೆ ಶೂನ್ಯಇಂಗಾಲದ ಹೊರಸೂಸುವಿಕೆಯಾಗುವತ್ತ ಮುನ್ನಡೆಸಾಧಿಸುತ್ತಿದೆ. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಿದ ನಂತರ, ರೈಲ್ವೆಮತ್ತೊಂದುಮೈಲಿಗಲ್ಲು ಸಾಧಿಸಿದೆ ಎಂದು ರೈಲ್ವೆ ಸಚಿವಾಲಯ ಹೇಳಿದೆ.