ಯಾದಗಿರಿ: ಯಾದಗಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ’ ಅಂಗವಾಗಿ ಮಾನ್ಯ ಆರೋಗ್ಯ ಸಚಿವರಾದ ಬಿ.ಶ್ರೀರಾಮುಲು ಅವರು ಧ್ವಜಾರೋಹಣ ನೆರವೇರಿಸಿ, ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿದರು. ಹಾಗೆಯೇ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು.

ನಂತರ “ಕಲ್ಯಾಣ ಕರ್ನಾಟಕ ಭಾಗದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ನಿಜಕ್ಕೂ ಚಿರಸ್ಮರಣೀಯ. ಈ ಭಾಗವನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.” ಎಂದು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ಸಮಾರಂಭದಲ್ಲಿ ಈ ಭಾಗದ ಜನಪ್ರತಿನಿಧಿಗಳು, ಮಾನ್ಯ ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.