Friday, February 21, 2025
Homeಕರ್ನಾಟಕರಾಜ್ಯ-ರಾಷ್ಟ್ರೀಯ ಸಂಕ್ಷಿಪ್ತ ಸುದ್ದಿಗಳು

ರಾಜ್ಯ-ರಾಷ್ಟ್ರೀಯ ಸಂಕ್ಷಿಪ್ತ ಸುದ್ದಿಗಳು

  • ಲಂಡನ್‌ನಲ್ಲಿ ನಡೆಯುತ್ತಿರುವ ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಸಿಂಗಲ್ಸ್ ವಿಭಾಗದಲ್ಲಿ ಪ್ರಮುಖ ಆಟಗಾರರು ಮುನ್ನಡೆ ಸಾಧಿಸಿದ್ದಾರೆ.
  • ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಗುಜರಾತ್ ಸರ್ಕಾರ ಈ ತಿಂಗಳ 11 ರಿಂದ ವಿಮಾ ರಕ್ಷಣೆಯನ್ನು ದ್ವಿಗುಣಗೊಳಿಸಿದೆ.
  • ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾಕ್ಟರ್ ಬಾಬು ಜಗಜೀವನರಾಮ್ ಅವರ 37ನೇ ಪುಣ್ಯ ಸ್ಮರಣೆ ಅಂಗವಾಗಿ ಇಂದು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
  • ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಜುಲೈ 19 ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆಯುತ್ತದೆ.
  • ಕರ್ನಾಟಕ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿಂದು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸರ್ಕಾರ ಸದನದಲ್ಲಿ ಉತ್ತರ ನೀಡುವ ಸಾಧ್ಯತೆ ಇದೆ.
  • ಬೆಳಗಾವಿ, ಧಾರವಾಡ, ಚಿತ್ರದುರ್ಗಗಳಲ್ಲಿ ಆರೆಂಜ್ ಅಲರ್ಟ್, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
  • ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
  • ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೇರಳ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಮತ್ತಿತರ ಕೇಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
  • ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೇತೃತ್ವದ ಭಾರತೀಯ ಸಂಸದೀಯ ನಿಯೋಗ, ಇಂದಿನಿಂದ ಮೂರು ದಿನಗಳ ಕಾಲ ಮಂಗೋಲಿಯಾ ಪ್ರವಾಸ ಕೈಗೊಳ್ಳಲಿದೆ.
  • ತಾಂಜಾನಿಯಾಗೆ ನಾಲ್ಕು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾಕ್ಟರ್ ಎಸ್. ಜೈಶಂಕರ್, ನಿನ್ನೆ ಸಂಜೆ ಜಾಂಜಿಬಾರ್ ತಲುಪಿದ್ದಾರೆ.
  • ನವದೆಹಲಿಯಲ್ಲಿ ಇಂದು ನಡೆಯಲಿರುವ ರಕ್ಷಣಾ ಸಚಿವಾಲಯದ ಚಿಂತನ ಶಿಬಿರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಲಿದ್ದಾರೆ.
  • ವಾರಾಣಸಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
  • ಛತ್ತೀಸ್‌ಗಢದ ರಾಯ್‌ಪುರದಲ್ಲಿ ಸುಮಾರು 6,400 ಕೋಟಿ ರೂಪಾಯಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ.
  • ಪ್ರಧಾನಮಂತ್ರಿ ನರೇಂದ್ರ ಮೋದಿ, ನಾಳೆ ಮತ್ತು ನಾಡಿದ್ದು ನಾಲ್ಕು ರಾಜ್ಯಗಳಿಗೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಸುಮಾರು 50 ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  • ಭಾರತದ ಜಿ-20 ಅಧ್ಯಕ್ಷತೆಯ ಭಾಗವಾಗಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ, ಬಾಹ್ಯಾಕಾಶ ಆರ್ಥಿಕ ನಾಯಕರ ನಾಲ್ಕನೇ ಆವೃತ್ತಿಯ ಸಭೆ ನಡೆಯಲಿದೆ.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news