ಲಿಂಗಸಗೂರು: ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಇರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಎಸ್. ಸವದಿ ಅವರು ಸೋಂಕಿತರ ಆರೋಗ್ಯ ವಿಚಾರಿಸಿ ಚಿಕಿತ್ಸಾ ಕೇಂದ್ರದ ಸೌಲಭ್ಯಗಳ ಕುರಿತು ಪರಿಶೀಲಿಸಿದರು.


ಅಲ್ಲದೇ ಲಿಂಗಸ್ಗೂರು ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರಿಗಳೊಂದಿಗೆ ಕೋವಿಡ್-19 ಸಾಂಕ್ರಾಮಿಕತೆಯನ್ನು ನಿಯಂತ್ರಿಸುವ ಸಲುವಾಗಿ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಿದರು.

ನಂತರ ಮಾದ್ಯಮದವರೊಂದಿಗೆ ಮಾತನಾಡಿನ ಅವರು “ಸರ್ಕಾರಿ ಆಸ್ಪತ್ರೆಯ ವೈದ್ಯರು ಉತ್ತಮ ರೀತಿಯ ಕೆಲಸ ಮಾಡುತ್ತಿರುವುದು ಸಮಾಧಾನ ತಂದಿದೆ, ನಾಲ್ಕು ವೆಂಟಿಲೇಟರ್ ಪ್ರಾರಂಭಿಸಿದ್ದಾರೆ, ಹೋಮ್ ಐಸೋಲೇಷನ್ ನಲ್ಲಿರುವವರಲ್ಲಿ ಸ್ಥಿತಿ ವಂತರಾಗಿದ್ದಲ್ಲಿ ಹೋಟೇಲ್ ಗಳಲ್ಲಿ ಉಳಿದುಕೊಳ್ಳಬೇಕು ಉಳಿದವರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರಲು ವ್ಯವಸ್ಥೆಯಾಗಬೇಕು, ಹಟ್ಟಿ ಚಿನ್ನದ ಗಣಿಯಲ್ಲಿ ನೂರು ಹಾಸಿಗೆ ಕೋವಿಡ್ ಕೇರ್ ಆಸ್ಪತ್ರೆ ತೆರೆಯಲು ಸೂಚಿಸಿದ್ದು ಅದಕ್ಕೆ ಸಂಬಂಧಿಸಿದಂತೆ ಗಣಿ ಅಧ್ಯಕ್ಷರು ಕಾರ್ಯಪ್ರವೃತ್ತರಾಗಿದ್ದಾರೆ, ಅಧಿಕಾರಿಗಳು ಇನ್ನೂ ಹೆಚ್ಚಿನ ಆಸಕ್ತಿಯೊಂದಿಗೆಯೊಂದಿಗೆ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್, ಸಹಾಯಕ ಆಯುಕ್ತರಾದ ರಾಜಶೇಖರ್ ಡಂಬಳ್, ಶಾಸಕರಾದ ಡಿ.ಎಸ್.ಹೂಲಗೇರಿ, ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಮಾನಪ್ಪ ಡಿ ವಜ್ಜಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಮ್, ಡಿ ವೈ ಎಸ್ ಪಿ ಎಸ್. ಎಸ್. ಹುಲ್ಲೂರು, ತಹಸೀಲ್ದಾರ್ ಚಾಮರಾಜ್ ಪಾಟೀಲ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ತಾಲೂಕು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.
