ಸಂಕ್ಷಿಪ್ತ ಸುದ್ದಿ:
ವಿಜಯಪುರ: ಇಂದು ಮುಂಜಾನೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ, ವಿಜಯಪುರದಲ್ಲಿ ಹೊಸದಾಗಿ ನಿರ್ಮಿಸಲಿರುವ ವಿಮಾನ ನಿಲ್ದಾಣದ ನೀಲಿ ನಕ್ಷೆ ಹಾಗೂ ಸ್ಥಳವನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಡಿಸಿಎಮ್ ಗೋವಿಂದ ಕಾರಜೋಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ವಾರ್ತಾ ಮತ್ತು ಪ್ರಚಾರ ಇಲಾಖೆಯ ನೂತನ ಬಸ್ ಗೆ ಚಾಲನೆ ನೀಡಿದರು. ಸಂಬಂಧಿಸಿದ ಇಲಾಖೆಯ ಮತ್ತು ಜಿಲ್ಲೆಯ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
