ಸಂಕ್ಷಿಪ್ತ ಸುದ್ದಿ:
ವಿಜಯಪುರ: ಜಿಲ್ಲೆಯ ತಾಳಿಕೋಟೆ ಬಸ್ ಘಟಕದ ಸಿಬ್ಬಂದಿ ವಸತಿಗೃಹಗಳ ಕಟ್ಟಡ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ (ಅಡಿಗಲ್ಲು) ಸಮಾರಂಭವನ್ನು ಇಂದು, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಎ. ಎಸ್. ಪಾಟೀಲ್ ನಡಹಳ್ಳಿ ಹಾಗೂ ಜಿಲ್ಲೆಯ, ತಾಲೂಕಿನ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.