ಸಂಕ್ಷಿಪ್ತ ಸುದ್ದಿ:
ಶಿವಮೊಗ್ಗ: ಇದೇ ಗುರುವಾರ ರಾತ್ರಿ ದುರ್ಘಟನೆ ಸಂಭವಿಸಿದ ಹುಣಸೋಡು ಕಲ್ಲು ಕ್ವಾರೆ ಪ್ರದೇಶಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಡೆದ ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದರು.


ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ, ಶಾಸಕರಾದ ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಜೊತೆಗಿದ್ದರು.