ಬಂಟ್ವಾಳ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತು ಕಾನೂನಿನಡಿ ತನಿಖೆ ನಡೆಯಲಿದೆ. ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿರೋಧ ಪಕ್ಷದವರು ಈ ಕುರಿತು ತಪ್ಪುಗಳನ್ನು ಕಂಡು ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದರು.

ಕರಾವಳಿ ಪ್ರದೇಶದಲ್ಲಿ ಟೆಂಪಲ್ ಟೂರಿಸಂ ಹಾಗೂ ಮೀನುಗಾರರ ಜೀವನಮಟ್ಟ ಸುಧಾರಿಸಲು ಸರ್ಕಾರ ಬಜೆಟ್ ನಲ್ಲಿ ವಿಶೇಷ ಅನುದಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೀನುಗಾರರು ಆಧುನಿಕ ದೋಣಿಗಳನ್ನು ಮೀನುಗಾರಿಕೆಗೆ ಬಳಸಲು ಸಬ್ಸಿಡಿ ನೀಡುವ ಮೂಲಕ ಅನುವು ಮಾಡಿಕೊಟ್ಟಿದ್ದು, ಈ ಭಾಗದಲ್ಲಿ ಕೈಗಾರಿಕೆಗಳ ಪುನಶ್ಚೇತನಕ್ಕೆ ಇಂಡಸ್ಟ್ರೀಯಲ್ ಪಾರ್ಕ್ ಸ್ಥಾಪಿಸಲು ಭೂಮಿ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿರುವುದಾಗಿ ತಿಳಿಸಿದರು.
