ನ್ಯೂಸ್ ಲೈನ್ !
2021-2022ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜನವರಿ 21ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.