ನ್ಯೂಸ್ ಲೈನ್ !
ಕೋವಿಡ್-19 ಪರೀಕ್ಷೆ ವೇಳೆ ಸೋಂಕು ದೃಢಪಟ್ಟರೂ ಮಾಹಿತಿ ನೀಡದೇ ಇರುವ ಪ್ರಕರಣಗಳು ವರದಿಯಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕ್ರಮಕ್ಕೆ ಮುಂದಾಗಿರುವ ಸರಕಾರ, ಸ್ವಯಂ ಪರೀಕ್ಷೆಗೆ ಕಿಟ್ ಖರೀದಿಸುವವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಗೆ ಸಲ್ಲಿಸಬೇಕು ಎಂದು ಔಷಧ ಅಂಗಡಿಗಳಿಗೆ ಸೂಚನೆ ನೀಡಿದೆ.