ಸಂಕ್ಷಿಪ್ತ ಸುದ್ದಿ:
ಹುಬ್ಬಳ್ಳಿ: ದೊಡ್ಡ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರಾದ ಜಗದೀಶ್ ಶೆಟ್ಟರ್ ಅವರು ಸ್ಥಳಿಯ ಸರ್ಕಿಟ್ ಹೌಸ್ ನಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ‘ಜಲಧಾರೆ’ ಯೋಜನೆಯ ರೂಪುರೇಷೆಗಳ ಕುರಿತು ರಾಜ್ಯ ಸರ್ಕಾರದಿಂದ ನೇಮಿಸಿದ ಸಮಾಲೋಚಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು.

ಈ ಸಂದರ್ಭದಲ್ಲಿ ಇಲಾಖಾ ಸಂಬಂಧಿತ ಅಧಿಕಾರಿ ವರ್ಗದವರು ಹಾಜರಿದ್ದರು.