ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ತಿರುಪತಿ ತಿರುಮಲ ದೇವಸ್ಥಾನಂ ಟ್ರಸ್ಟ್ ನ ಅಧ್ಯಕ್ಷ ಶ್ರೀ ವಾಯ್.ವಿ.ಸುಬ್ಬಾರೆಡ್ಡಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ತಿರುಪತಿಯಲ್ಲಿ ರಾಜ್ಯ ಸರ್ಕಾರ ಸುಮಾರು 200 ಕೋಟಿ ರೂಪಾಯಿಗಳ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ನಿರ್ಮಾಣ ಕುರಿತು ಚರ್ಚಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.